ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
25ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು.
26ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.
27ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು.
28ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.
29ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ