ಯೆಹೆಜ್ಕೇಲನು 4:11

ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 4

9ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.

10ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.

11ನೀನು ನೀರನ್ನು ಸಹ ಅಳತೆಯ ಪ್ರಕಾರ ಕುಡಿಯಬೇಕು. ಹಿನ್ನಿನ ಆರನೆಯ ಪಾಲನ್ನು ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.

12ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;

13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.

ಯೆಹೆಜ್ಕೇಲನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी