ಆದಿಕಾಂಡ 30:30

ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 30

28ನೀನು ನಿನ್ನ ಸಂಬಳವನ್ನು ನಿರ್ಣಯಿಸು; ಆಗ ಅದನ್ನು ನಾನು ನಿನಗೆ ಕೊಡುವೆನು ಅಂದನು.

29ಅದಕ್ಕೆ ಯಾಕೋಬನು ಅವನಿಗೆ--ನಾನು ನಿನಗೆ ಮಾಡಿದ ಸೇವೆಯನ್ನೂ ನಿನ್ನ ಮಂದೆಯು ನನ್ನ ಬಳಿಯಲ್ಲಿ ಹೇಗೆ ಇತ್ತೆಂಬದ್ದನ್ನೂ ನೀನು ಬಲ್ಲೆ.

30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.

31ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;

32ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.

ಆದಿಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी