ಎಜ್ರನು 9:6

ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.

ಸಂದರ್ಭದೊಂದಿಗೆ ಓದಿ · ಎಜ್ರನು 9

4ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್‌ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;

5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--

6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.

7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ

8ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.

ಎಜ್ರನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी