ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
6ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.
7ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
8ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
9ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.
10ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ