೨ ಅರಸುಗಳು 16:10

ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 16

8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.

9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್‌ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.

10ಅರಸನಾದ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ ಅಲ್ಲಿ ಒಂದು ಬಲಿಪೀಠವನ್ನು ಕಂಡನು. ಆಗ ಅರಸ ನಾದ ಆಹಾಜನು ಆ ಬಲಿಪೀಠದ ರೂಪವನ್ನೂ ಅದರ ಎಲ್ಲಾ ಕೈ ಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.

11ಆಗ ಯಾಜಕನಾದ ಊರೀಯನು ಅರಸನಾದ ಆಹಾಜನು ದಮಸ್ಕದಿಂದ ಕಳುಹಿಸಿದ ಪ್ರಕಾರವೇ ಒಂದು ಬಲಿ ಪೀಠವನ್ನು ಕಟ್ಟಿಸಿದನು; ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬಂದಾಗ ಯಾಜಕನಾದ ಊರೀಯನು ಅದನ್ನು ಮಾಡಿಸಿದನು.

12ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ನೋಡಿ ಬಲಿಪೀಠದ ಬಳಿಗೆ ಹೋಗಿ ಅದರ ಮೇಲೆ ಬಲಿ ಯನ್ನರ್ಪಿಸಿದನು.

೨ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी