ನೆಹೆಮಿಯ 1:5

ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,

ಸಂದರ್ಭದೊಂದಿಗೆ ಓದಿ · ನೆಹೆಮಿಯ 1

3ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.

4ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--

5ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ,

6ನಿನ್ನ ಸೇವಕರಾದ ಇಸ್ರಾಯೇಲ್‌ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್‌ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ.

7ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.

ನೆಹೆಮಿಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी