ಯೆರೆಮಿಯ 50:2

ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

1ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು.

2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್‌ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;

3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.

4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी