ವಿಮೋಚನಕಾಂಡ 6:6

ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 6

4ಕಾನಾನ್‌ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.

5ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್‌ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.

6ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ

7ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು.

8ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.

ವಿಮೋಚನಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी