೨ ಅರಸುಗಳು 11:6

ಮೂರನೇ ಭಾಗವು ಸೂರ್‌ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 11

4ಆದರೆ ಏಳನೇ ವರುಷದಲ್ಲಿ ಯೆಹೋಯಾದಾ ವನು ನೂರಕ್ಕೆ ಅಧಿಪತಿಯಾದವರನ್ನೂ ರಾಣುವೆಯ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯ ಕಳುಹಿಸಿ ತನ್ನ ಬಳಿಗೆ ಕರ್ತನ ಮನೆಗೆ ಕರಕೊಂಡು ಅವರ ಸಂಗಡ ಒಡಂಬಡಿಕೆಯನ್ನು ಮಾಡಿ ಕರ್ತನ ಮನೆಯಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು ಅವರಿಗೆ ಅರಸನ ಮಗನನ್ನು ತೋರಿಸಿ

5ಅವರಿಗೆ ಆಜ್ಞಾಪಿಸಿ--ನೀವು ಮಾಡಬೇಕಾದದ್ದೇನಂದರೆ ಸಬ್ಬತ್‌ ದಿವಸದಲ್ಲಿ ಪ್ರವೇಶಿಸುವವರಾದ ನಿಮ್ಮೊಳಗಿನ ಮೂರನೇ ಭಾಗವು ಅರಸನ ಮನೆಯ ಕಾವಲಿನ ಮೇಲೆ ಕಾವಲುಗಾರರಾಗಿ ಇರ್ರಿ.

6ಮೂರನೇ ಭಾಗವು ಸೂರ್‌ ಎಂಬ ಬಾಗಲ ಬಳಿಯಲ್ಲಿಯೂ ಮತ್ತೊಂದು ಮೂರನೇ ಭಾಗವು ಕಾವಲಿನ ಹಿಂದೆ ಇರುವ ಬಾಗಲ ಬಳಿಯಲ್ಲಿಯೂ ಇರ್ರಿ. ಹೀಗೆಯೇ ಮನೆಯ ಕಾವಲು ಮುರಿಯಲ್ಪಡದ ಹಾಗೆ ಅದನ್ನು ಕಾಯಿರಿ.

7ಇದಲ್ಲದೆ ಸಬ್ಬತ್‌ ದಿವಸದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಅರಸನ ಬಳಿಯಲ್ಲಿ ಕರ್ತನ ಮನೆಯ ಕಾವಲು ಕಾಯುವವರಾಗಿರ್ರಿ.

8ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡುಕೊಂಡು ಅರಸ ನನ್ನು ಸುತ್ತಿಕೊಂಡಿರ್ರಿ; ಯಾವನಾದರೂ ಸಾಲುಗಳಲ್ಲಿ ಬಂದರೆ ಅವನು ಕೊಲೆಯಾಗಲಿ. ಆದರೆ ಅರಸನು ಹೊರಗೆ ಹೋಗುವಾಗಲೂ ಒಳಗೆ ಬರುವಾಗಲೂ ನೀವು ಅವನ ಸಂಗಡ ಇರ್ರಿ.

೨ ಅರಸುಗಳು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी