ಯೆರೆಮಿಯ 51:53

ಬಾಬೆಲ್‌ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.

52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.

53ಬಾಬೆಲ್‌ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.

54ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.

55ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी