ವಿಮೋಚನಕಾಂಡ 15:24

ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 15

22ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.

23ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.

24ಆದದ ರಿಂದ ಜನರು--ನಾವು ಏನು ಕುಡಿಯೋಣ ಎಂದು ಹೇಳಿ ಮೋಶೆಗೆ ವಿರೋಧವಾಗಿ ಗುಣುಗುಟ್ಟಿದರು.

25ಅವನು ಕರ್ತನಿಗೆ ಮೊರೆಯಿಟ್ಟನು; ಆಗ ಕರ್ತನು ಅವನಿಗೆ ಒಂದು ಮರವನ್ನು ತೋರಿಸಿದನು; ಅವನು ಅದನ್ನು ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಗಿ ಮಾಡಲ್ಪಟ್ಟಿತು; ಅಲ್ಲಿ ಆತನು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿ, ಅಲ್ಲಿಯೇ ಅವರನ್ನು ಪರೀಕ್ಷಿಸಿದನು.

26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.

ವಿಮೋಚನಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी