ಲೂಕನು 4:22

ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.

ಸಂದರ್ಭದೊಂದಿಗೆ ಓದಿ · ಲೂಕನು 4

20ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.

21ಆತನು ಅವರಿಗೆ--ನೀವು ಕಿವಿಯಿಂದ ಕೇಳಿದ ಈ ಬರಹವು ಈ ದಿವಸ ನೆರವೇರಿತು ಎಂದು ಹೇಳಲಾರಂಭಿಸಿದನು.

22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.

23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.

24ಆತನು--ನಿಮಗೆ ನಿಜವಾಗಿ ಹೇಳುವದೇನಂದರೆ--ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವದಿಲ್ಲ.

ಲೂಕನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी