ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
25ಅವುಗಳನ್ನು ಹಣಕ್ಕೆ ಮಾರಿಬಿಟ್ಟು ಆ ಹಣವನ್ನು ನಿನ್ನ ಕೈಯಲ್ಲಿ ಹಿಡುಕೊಂಡು ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳಕ್ಕೆ ಹೋಗಬೇಕು.
26ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
27ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
28ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.
29ಆಗ (ನಿನ್ನ ಸಂಗಡ ಪಾಲನ್ನೂ ಸ್ವಾಸ್ತ್ಯವನ್ನೂ ಹೊಂದದ) ಲೇವಿಯನೂ ನಿನ್ನ ಬಾಗಲು ಗಳಲ್ಲಿರುವ ಅನ್ಯದೇಶದವನೂ ದಿಕ್ಕಿಲ್ಲದವನೂ ವಿಧ ವೆಯೂ ಬಂದು ನಿನ್ನ ದೇವರಾದ ಕರ್ತನು ನಿನ್ನನ್ನು ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಆಶೀರ್ವದಿಸುವ ಹಾಗೆ ತಿಂದು ತೃಪ್ತರಾಗಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ