೧ ಸಮುವೇಲನು 14:45

ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.

44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.

45ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು.

46ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.

47ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी