ಯೆರೆಮಿಯ 23:4

ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

2ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.

3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.

4ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.

5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी