ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
14ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
15ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
17ಅವನು ನಿಮ್ಮ ಬಳಿಗೆ ಹೋಗಬೇಕೆಂದು ನಾವು ಕೇಳಿಕೊಂಡಾಗ ನಿಜ ವಾಗಿಯೂ ಒಪ್ಪಿದ್ದಲ್ಲದೆ ಅತ್ಯಾಸಕ್ತನಾಗಿದ್ದು ತನ್ನಷ್ಟಕ್ಕೆ ತಾನೇ ನಿಮ್ಮ ಬಳಿಗೆ ಬಂದಿದ್ದಾನೆ.
18ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ