ಧರ್ಮೋಪದೇಶಕಾಂಡ 21:3

ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 21

1ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯ ವಾಗಿ ಕೊಡುವ ದೇಶದಲ್ಲಿ ಯಾವನಾ ದರೂ ಹತನಾಗಿ ಹೊಲದಲ್ಲಿ ಸಿಕ್ಕಿರಲಾಗಿ ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ

2ನಿನ್ನ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ ಆ ಹತವಾದವನ ಸುತ್ತಲಿರುವ ಪಟ್ಟಣಗಳ ವರೆಗೂ ಅಳತೆಮಾಡಬೇಕು.

3ಹತನಾದವನಿಗೆ ಸವಿಾಪವಾದ ಊರು ಯಾವದೋ ಆ ಊರಿನ ಹಿರಿಯರು ಕೆಲಸ ಮಾಡದಂಥ, ನೊಗದಲ್ಲಿ ಎಳೆದಂಥ, ಒಂದು ಕಡಸನ್ನು ತಮಗೆ ತಕ್ಕೊಳ್ಳಬೇಕು.

4ಆ ಮೇಲೆ ಆ ಊರಿನ ಹಿರಿಯರು ಆ ಮಣಕವನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜಹಾಕದಂಥ, ಸ್ಥಳಕ್ಕೆ ತಕ್ಕೊಂಡು ಹೋಗಿ ಅಲ್ಲಿ ಹಳ್ಳದಲ್ಲಿ ಮಣಕದ ಕುತ್ತಿಗೆಯನ್ನು ಕೊಯ್ಯಬೇಕು.

5ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.

ಧರ್ಮೋಪದೇಶಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी