ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
14ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
15ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
16ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.
17ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.
18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ