ಲೂಕನು 11:44

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 11

42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.

43ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ.

44ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು.

45ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು.

46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.

ಲೂಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी