ವಿಮೋಚನಕಾಂಡ 34:12

ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 34

10ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.

11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.

12ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆಯನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವದು.

13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.

14ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.

ವಿಮೋಚನಕಾಂಡ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी