ಯಾಜಕಕಾಂಡ 16:32

ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 16

30ಯಾಕಂದರೆ ನೀವು ಕರ್ತನ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತ ವನ್ನು ಮಾಡುವನು.

31ಇದೇ ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿರುವದು. ನಿಮಗೆ ನಿತ್ಯವಾದ ನಿಯಮ ವಿರುವಂತೆ ನಿಮ್ಮ ಪ್ರಾಣಗಳನ್ನು ಕುಂದಿಸಬೇಕು.

32ಯಾವನು ತನ್ನ ತಂದೆಯ ಬದಲಾಗಿ ಯಾಜಕ ಉದ್ಯೋಗಕ್ಕೋಸ್ಕರ ಅಭಿಷೇಕಿಸಲ್ಪಟ್ಟವನಾಗಿ ಪ್ರತಿಷ್ಠಿಸ ಲ್ಪಟ್ಟಿದ್ದಾನೋ ಆ ಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು.

33ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು. ಹೀಗೆ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಇದ ಲ್ಲದೆ ಸಭೆಯ ಗುಡಾರಕ್ಕಾಗಿಯೂ ಯಜ್ಞವೇದಿ ಗಾಗಿಯೂ ಪ್ರಾಯಶ್ಚಿತ್ತಮಾಡಬೇಕು. ಯಾಜಕರಿ ಗಾಗಿಯೂ ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತಮಾಡಬೇಕು.

34ಹೀಗೆ ಇಸ್ರಾಯೇಲಿನ ಮಕ್ಕಳ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತಮಾಡುವಂತೆ ಇದು ನಿಮಗೆ ನಿರಂತರ ವಾದ ನಿಯಮವಾಗಿರುವದು ಎಂದು ಹೇಳಿದನು. ಕರ್ತನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.

ಯಾಜಕಕಾಂಡ 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी