ಯೆಶಾಯ 46:2

ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.

ಸಂದರ್ಭದೊಂದಿಗೆ ಓದಿ · ಯೆಶಾಯ 46

1ಬೇಲ್‌(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.

2ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.

3ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--

4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.

ಯೆಶಾಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी