ಮತ್ತಾಯನು 8:15

ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.

ಸಂದರ್ಭದೊಂದಿಗೆ ಓದಿ · ಮತ್ತಾಯನು 8

13ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.

14ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು.

15ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.

16ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.

17ಹೀಗೆ--ಆತನು ತಾನೇ ನಮ್ಮ ಬಲಹೀನತೆಗಳನ್ನು ತಕ್ಕೊಂಡು ರೋಗಗಳನ್ನು ಹೊತ್ತನು ಎಂಬದಾಗಿ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು.

ಮತ್ತಾಯನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी