ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
1ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
2ನನ್ನ ಜೊತೆಯಲ್ಲಿರುವ ಎಲ್ಲಾ ಸಹೋದರರೂ ಗಲಾತ್ಯದಲ್ಲಿರುವ ಸಭೆಗಳಿಗೆ--
3ತಂದೆಯಾದ ದೇವ ರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
4ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ಪ್ರಪಂಚದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆ ಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗೋಸ್ಕರ ತನ್ನನ್ನು ತಾನೇ ಒಪ್ಪಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ