ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
1ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
3ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
4ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ