ಮತ್ತಾಯನು 5:24

ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.

ಸಂದರ್ಭದೊಂದಿಗೆ ಓದಿ · ಮತ್ತಾಯನು 5

22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು

23ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ

24ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.

25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.

26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी