ದಾನಿಯೇಲನು 8:2

ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್‌ ಸೀಮೆ ಯಲ್ಲಿರುವ ಶೂಷನ್‌ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 8

1ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳಿಕೆಯ ಮೂರನೆಯ ವರುಷದಲ್ಲಿಯೂ ಇನ್ನೊಂದು ದರ್ಶನವು ದಾನಿಯೇಲನಾದ ನನಗೆ ಕಾಣಿಸಿತು.

2ಈ ದರ್ಶನದಲ್ಲಿ ನಾನು ನೋಡಿದ್ದೇನಂದರೆ--ನಾನು ಏಲಾಮ್‌ ಸೀಮೆ ಯಲ್ಲಿರುವ ಶೂಷನ್‌ನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ಊಲಾ ನದಿಯ ದಡದ ಮೇಲೆ ನಿಂತಿ ರುವ ಹಾಗೆ ನನಗೆ ತೋರಿತು.

3ಆಗ ನಾನು ಕಣ್ಣೆತ್ತಿ ನೋಡಿದಾಗ ಇಗೋ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ಉದ್ದವಾಗಿತ್ತು. ಆ ದೊಡ್ಡ ಕೊಂಬು, ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.

4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.

ದಾನಿಯೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी