ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
26ಅದಕ್ಕೆ ಕರ್ತನು--ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.
27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.
28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ