ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
20ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
21ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.
22ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ