ವಿಮೋಚನಕಾಂಡ 13:20

ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 13

18ಹೀಗಿರುವದರಿಂದ ಕರ್ತನು ಜನರನ್ನು ಕೆಂಪು ಸಮುದ್ರದ ಅರಣ್ಯ ಮಾರ್ಗ ದಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದನು. ಆದಾಗ್ಯೂ ಇಸ್ರಾಯೇಲ್‌ ಮಕ್ಕಳು ಯುದ್ಧಸನ್ನದ್ಧರಾಗಿ ಐಗುಪ್ತದೇಶದೊಳಗಿಂದ ಹೋದರು.

19ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬು ಗಳನ್ನು ತಕ್ಕೊಂಡು ಹೋದನು. ಅವನು ಇಸ್ರಾಯೇಲ್‌ ಮಕ್ಕಳಿಗೆ--ದೇವರು ನಿಶ್ಚಯವಾಗಿಯೂ ನಿಮ್ಮನ್ನು ದರ್ಶಿಸುವನು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು ಎಂದು ಹೇಳಿ ಖಂಡಿತವಾಗಿ ಪ್ರಮಾಣಮಾಡಿಸಿದ್ದನು.

20ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ ಏತಾಮಿನ ಅರಣ್ಯದ ಅಂಚಿನಲ್ಲಿ ಇಳುಕೊಂಡರು.

21ಇದಲ್ಲದೆ ಅವರು ಹಗಲಿರುಳು ಪ್ರಯಾಣ ಮಾಡುವ ಹಾಗೆ ಕರ್ತನು ಹಗಲಲ್ಲಿ ಅವರಿಗೆ ದಾರಿ ತೋರಿಸುವದಕ್ಕೆ ಮೇಘಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವದಕ್ಕೆ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ಹೋದನು.

22ಆತನು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದು ಬಿಡಲಿಲ್ಲ.

ವಿಮೋಚನಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी