೧ ಅರಸುಗಳು 16:14

ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್‌ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

ಸಂದರ್ಭದೊಂದಿಗೆ ಓದಿ · ೧ ಅರಸುಗಳು 16

12ಹೀಗೆ ಭಾಷನೂ ಅವನ ಮಗನಾದ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಕರ್ತನಿಗೆ ಕೋಪವನ್ನು ಎಬ್ಬಿಸಿ ತಾವು ಮಾಡಿದ ಪಾಪಗಳಿಂದಲೂ ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದ ರಿಂದಲೂ

13ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.

14ಏಲನ ಇತರ ಕ್ರಿಯೆ ಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್‌ ಅರಸು ಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?

15ಯೆಹೂದದ ಅರಸನಾದ ಆಸನ ಇಪ್ಪತ್ತೇಳನೇವರುಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಏಳು ದಿವಸ ಆಳಿದನು. ಆಗ ಜನರು ಫಿಲಿಷ್ಟಿಯರಿಗೆ ಸಂಬಂಧ ಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಾಗಿ ಇಳಿದಿರುವ

16ಜಿಮ್ರಿಯು ಒಳಸಂಚು ಮಾಡಿ ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿ ದ್ದರಿಂದ ಇಸ್ರಾಯೇಲ್ಯರೆಲ್ಲರೂ ಅದೇ ದಿವಸದಲ್ಲಿ ದಂಡಿನೊಳಗೆ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗ ಮಾಡಿದರು.

೧ ಅರಸುಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी