ಯೋಹಾನನು 8:14

ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.

ಸಂದರ್ಭದೊಂದಿಗೆ ಓದಿ · ಯೋಹಾನನು 8

12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

13ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.

14ಯೇಸು ಪ್ರತ್ಯುತ್ತರವಾಗಿ ಅವರಿಗೆ--ನನ್ನ ವಿಷಯ ವಾಗಿ ನಾನು ಸಾಕ್ಷಿಕೊಟ್ಟಾಗ್ಯೂ ನನ್ನ ಸಾಕ್ಷಿ ನಿಜವೇ; ಯಾಕಂದರೆ ನಾನು ಎಲ್ಲಿಂದ ಬಂದೆನೋ ಮತ್ತು ಎಲ್ಲಿಗೆ ಹೋಗುತ್ತೇನೋ ನಾನು ಬಲ್ಲೆನು; ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನೀವು ಹೇಳಲಾರಿರಿ.

15ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ.

16ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.

ಯೋಹಾನನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी