ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
10ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
12ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ