ಯೋಹಾನನು 19:29

ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.

ಸಂದರ್ಭದೊಂದಿಗೆ ಓದಿ · ಯೋಹಾನನು 19

27ಆಮೇಲೆ ಆತನು ಆ ಶಿಷ್ಯನಿಗೆ--ಇಗೋ, ನಿನ್ನ ತಾಯಿಯು ಅಂದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಸೇರಿಸಿಕೊಂಡನು.

28ಇದಾದ ಮೇಲೆ ಯೇಸು ಆಗ ಎಲ್ಲವೂ ಪೂರೈಸಲ್ಪಟ್ಟಿತೆಂದು ತಿಳಿದು ಬರಹವು ನೆರವೇರು ವಂತೆ--ನನಗೆ ನೀರಡಿಕೆಯಾಗಿದೆ ಅಂದನು.

29ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು; ಅವರು ಸ್ಪಂಜನ್ನು ಹುಳಿರಸದಿಂದ ತುಂಬಿಸಿ ಹಿಸ್ಸೋಪಿಗೆ ಸಿಕ್ಕಿಸಿ ಆತನ ಬಾಯಿಗೆ ಇಟ್ಟರು.

30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.

31ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್‌ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी