ಯೆರೆಮಿಯ 3:14

ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 3

12ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ.

13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.

14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.

15ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.

16ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.

ಯೆರೆಮಿಯ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी