ನ್ಯಾಯಸ್ಥಾಪಕರು 5:26

ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 5

24ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು.

25ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.

26ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.

27ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು.

28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?

ನ್ಯಾಯಸ್ಥಾಪಕರು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी