ವಿಮೋಚನಕಾಂಡ 10:12

ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 10

10ಫರೋ ಹನು ಅವರಿಗೆ--ನಾನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಹೇಗೆ ಕಳುಹಿಸುವೆನೋ ಹಾಗೆಯೇ ಕರ್ತನು ನಿಮ್ಮ ಸಂಗಡ ಇರಲಿ. ನೋಡಿರಿ, ನಿಮ್ಮ ಮುಂದೆ ಕೇಡು ಇದೆ.

11ಹಾಗೆ ಮಾಡದೆ ಈಗ ಗಂಡಸರಾದ ನೀವು ಹೋಗಿ ಕರ್ತನಿಗೆ ಸೇವೆಮಾಡಿರಿ; ಇದನ್ನೇ ನೀವು ಬಯಸಿದಿರಿ ಅಂದನು. ತರುವಾಯ ಅವರು ಫರೋಹನ ಎದುರಿನಿಂದ ಹೊರದೂಡಲ್ಪಟ್ಟರು.

12ಆಗ ಕರ್ತನು ಮೋಶೆಗೆ--ಮಿಡತೆಗಳಿಗಾಗಿ ನಿನ್ನ ಕೈಯನ್ನು ಐಗುಪ್ತದ ಮೇಲೆ ಚಾಚು. ಅವು ಐಗುಪ್ತದ ಮೇಲೆ ಬಂದು ಆ ದೇಶದಲ್ಲಿರುವ ಹಸುರಾದದ್ದನ್ನೆಲ್ಲಾ ಅಂದರೆ ಆನೆಕಲ್ಲಿನ ಮಳೆಯು ಉಳಿಸಿದ್ದದನ್ನೆಲ್ಲಾ ತಿಂದು ಬಿಡಲಿ ಅಂದನು.

13ಮೋಶೆಯು ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಕರ್ತನು ಹಗಲಿರುಳೂ ಮೂಡಣಗಾಳಿಯನ್ನು ಬರಮಾಡಿದನು. ಉದ ಯವಾದಾಗ ಆ ಮೂಡಣ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.

14ಹೀಗೆ ಮಿಡತೆಗಳು ಐಗುಪ್ತ ದೇಶದಲ್ಲೆಲ್ಲಾ ಬಂದು ಐಗುಪ್ತದ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವು ಕ್ರೂರ ವಾದವುಗಳಾಗಿದ್ದವು. ಅವುಗಳಂತೆ ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.

ವಿಮೋಚನಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी