ಎಫೆಸದವರಿಗೆ 2:14

ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 2

12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.

13ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.

14ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.

15ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.

16ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.

ಎಫೆಸದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी