ಆಮೋಸ 8:6

ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?

ಸಂದರ್ಭದೊಂದಿಗೆ ಓದಿ · ಆಮೋಸ 8

4ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.

5ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ

6ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?

7ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.

8ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.

ಆಮೋಸ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी