ಆದಿಕಾಂಡ 2:22

ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 2

20ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.

21ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು.

22ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.

23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.

24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.

ಆದಿಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी