ಮಾರ್ಕನು 16:5

ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.

ಸಂದರ್ಭದೊಂದಿಗೆ ಓದಿ · ಮಾರ್ಕನು 16

3ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.

4ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.

5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.

6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;

7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.

ಮಾರ್ಕನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी