ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
19ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
20ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
21ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
22ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ