ಮತ್ತಾಯನು 11:3

ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.

ಸಂದರ್ಭದೊಂದಿಗೆ ಓದಿ · ಮತ್ತಾಯನು 11

1ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.

2ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--

3ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.

4ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;

5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.

ಮತ್ತಾಯನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी