ಆಗ ನಾತಾನನು ತನ್ನ ಮನೆಗೆ ಹೋದನು.
13ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
14ಹೇಗಿ ದ್ದರೂ ಈ ಕಾರ್ಯದಿಂದ ನೀನು ಕರ್ತನ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ ನಿನಗೆ ಹುಟ್ಟಿದ ಮಗುವು ಸಹ ನಿಶ್ಚಯ ವಾಗಿ ಸಾಯುವದು ಅಂದನು.
15ಆಗ ನಾತಾನನು ತನ್ನ ಮನೆಗೆ ಹೋದನು.
16ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
17ಅವನನ್ನು ಎಬ್ಬಿಸುವದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು; ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ