ಹೋಶೇ 7:8

ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಹೋಶೇ 7

6ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.

7ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.

8ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.

9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.

10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.

ಹೋಶೇ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी