ವಿಮೋಚನಕಾಂಡ 3:12

ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 3

10ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್‌ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.

11ಆಗ ಮೋಶೆಯು ದೇವರಿಗೆ--ಫರೋಹನ ಬಳಿಗೆ ಹೋಗುವ ಹಾಗೆಯೂ ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡು ವಂತೆಯೂ ನಾನು ಎಷ್ಟರವನು ಅಂದನು.

12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.

13ಅದಕ್ಕೆ ಮೋಶೆಯು ದೇವರಿಗೆ--ಇಗೋ, ಇಸ್ರಾಯೇಲ್‌ ಮಕ್ಕಳ ಬಳಿಗೆ ಹೋಗಿ--ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ಹೇಳುವಾಗ ಅವರು ನನಗೆ--ಆತನ ಹೆಸರು ಏನು ಎಂದು ಕೇಳಿದರೆ ನಾನು ಅವರಿಗೆ ಏನು ಹೇಳಬೇಕು ಅಂದನು.

14ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕು ಅಂದನು.

ವಿಮೋಚನಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी