ಧರ್ಮೋಪದೇಶಕಾಂಡ 29:23

ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್‌ ಗೊಮೋರ ಅದ್ಮಾಚೆಬೋ ಯಾಮ್‌ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 29

21ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.

22ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ

23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್‌ ಗೊಮೋರ ಅದ್ಮಾಚೆಬೋ ಯಾಮ್‌ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--

24ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.

25ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,

ಧರ್ಮೋಪದೇಶಕಾಂಡ 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी