ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
4ಇಸ್ರಾಯೇ ಲಿನ ದೇವರಾದ ಯೆಹೋವನು ಹೇಳುವದೇನಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬೆಲಿನ ಅರಸನಿಗೂ ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿ ಬರುವಂತೆ ಮಾಡುತ್ತೇನೆ.
5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
6ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
8ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ