ಲೂಕನು 4:7

ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಲೂಕನು 4

5ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.

6ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.

7ಆದದರಿಂದ ನೀನು ನನ್ನನ್ನು ಆರಾಧಿಸಿದರೆ ಎಲ್ಲವುಗಳು ನಿನ್ನದಾಗುವವು ಎಂದು ಹೇಳಿದನು.

8ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.

9ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;

ಲೂಕನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी